ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.