Home Bibles ☰ Books ಯೋನ 2:8 · ಕನ್ನಡ ಬೈಬಲ್
ಯೋನ 2:8 · ಕನ್ನಡ ಬೈಬಲ್

ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

Cross references

1 ಸಮುವೇಲ 12:21

ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.

2 ಅರಸುಗಳು 17:15

ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.

ಕೀರ್ತನೆಗಳು 31:6

ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.

ಕೀರ್ತನೆಗಳು 69:14

ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ

ಕೀರ್ತನೆಗಳು 142:4

ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.

ಯೆರೆಮಿಯ 2:13

ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.

ಯೆರೆಮಿಯ 10:8

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಯೆರೆಮಿಯ 10:14

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.

ಯೆರೆಮಿಯ 16:19

ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ಮೀಕ 1:2

ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.

ಹಬಕ್ಕೂಕ 2:18

ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?

Interlinear

Choose Theme