ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
Cross references
ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.