ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
Cross references
ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.
ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.