ಯೆಹೋಶುವ 11:19 · ಕನ್ನಡ ಬೈಬಲ್
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
Cross references
ಯೆಹೋಶುವ 9:3
ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
ಯೆಹೋಶುವ 9:7
ಆಗ ಇಸ್ರಾಯೇಲ್ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.
ಯೆಹೋಶುವ 9:15
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.