Home Bibles ☰ Books ಯೆಹೋಶುವ 11:22 · ಕನ್ನಡ ಬೈಬಲ್
ಯೆಹೋಶುವ 11:22 · ಕನ್ನಡ ಬೈಬಲ್

ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.

Cross references

ದ್ವಿತೀಯೋಪದೇಶಕಾಂಡ 2:23

ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)

ಯೆಹೋಶುವ 10:41

ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.

ಯೆಹೋಶುವ 15:46

ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ

ಯೆಹೋಶುವ 15:47

ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ

ನ್ಯಾಯಾಧಿಪತಿಗಳು 3:3

ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.

1 ಸಮುವೇಲ 5:1

ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.

1 ಸಮುವೇಲ 17:4

ಆದರೆ ಗತ್‌ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.

2 ಸಮುವೇಲ 21:16

ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.

1 ಅರಸುಗಳು 2:39

ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.

1 ದಿನವೃತ್ತಾಂತ 8:13

ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.

1 ದಿನವೃತ್ತಾಂತ 18:1

ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.

1 ದಿನವೃತ್ತಾಂತ 29:4

ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

2 ದಿನವೃತ್ತಾಂತ 26:6

ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

Interlinear

Choose Theme