Joshua
Chapter 12
ಕನ್ನಡ ಬೈಬಲ್1ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:
2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
4ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ
5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
6ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
8ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
9ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;
10ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು;
11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
12ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;
13ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
14ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;
15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
16ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು;
17ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;
18ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;
19ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;
20ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;
21ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;
22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
24ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
Bible Study with Steffi App
Download Free ↗
Memorize verses with spaced repetition. Free, no ads, 15+ languages.