Home Bibles ಯೆಹೋಶುವ 13:21 · ಕನ್ನಡ ಬೈಬಲ್
ಯೆಹೋಶುವ 13:21 · ಕನ್ನಡ ಬೈಬಲ್

ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.

Cross references

ಅಂಕೆಗಳ ಪುಸ್ತಕ 21:24

ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್‌ ನದಿಯಿಂದ ಯಬ್ಬೋಕ್‌ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.

ಅಂಕೆಗಳ ಪುಸ್ತಕ 25:15

ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.

ಅಂಕೆಗಳ ಪುಸ್ತಕ 31:8

ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.

ದ್ವಿತೀಯೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ದ್ವಿತೀಯೋಪದೇಶಕಾಂಡ 3:10

ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

Interlinear

Choose Theme