Home Bibles ಯೆಹೋಶುವ 13:30 · ಕನ್ನಡ ಬೈಬಲ್
ಯೆಹೋಶುವ 13:30 · ಕನ್ನಡ ಬೈಬಲ್

ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.

Cross references

ಆದಿಕಾಂಡ 32:3

ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.

ಅಂಕೆಗಳ ಪುಸ್ತಕ 32:39

ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.

ಅಂಕೆಗಳ ಪುಸ್ತಕ 32:41

ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.

ದ್ವಿತೀಯೋಪದೇಶಕಾಂಡ 3:4

ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.

ದ್ವಿತೀಯೋಪದೇಶಕಾಂಡ 3:10

ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

ದ್ವಿತೀಯೋಪದೇಶಕಾಂಡ 3:13

ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.

ಯೆಹೋಶುವ 13:26

ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್‌ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್‌ ಮೇರೆಯ ವರೆಗೂ ಇರುವ ದೇಶವು;

ಯೆಹೋಶುವ 21:38

ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ

1 ದಿನವೃತ್ತಾಂತ 2:21

ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.

1 ದಿನವೃತ್ತಾಂತ 2:22

ಸೆಗೂಬನು ಯಾಯಾರನನ್ನು ಪಡೆದನು.

Interlinear

Choose Theme