ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
Cross references
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
ಗೋಷೆನ್ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.
ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?