Home Bibles ಯೆಹೋಶುವ 14:12 · ಕನ್ನಡ ಬೈಬಲ್
ಯೆಹೋಶುವ 14:12 · ಕನ್ನಡ ಬೈಬಲ್

ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.

Cross references

ಅಂಕೆಗಳ ಪುಸ್ತಕ 13:28

ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.

ಅಂಕೆಗಳ ಪುಸ್ತಕ 13:33

ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.

ಅಂಕೆಗಳ ಪುಸ್ತಕ 14:8

ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.

ಅಂಕೆಗಳ ಪುಸ್ತಕ 14:9

ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

ಅಂಕೆಗಳ ಪುಸ್ತಕ 21:34

ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.

ದ್ವಿತೀಯೋಪದೇಶಕಾಂಡ 9:1

ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ

ದ್ವಿತೀಯೋಪದೇಶಕಾಂಡ 9:3

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

ಯೆಹೋಶುವ 11:21

ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.

ಯೆಹೋಶುವ 15:14

ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು.

ನ್ಯಾಯಾಧಿಪತಿಗಳು 1:20

ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.

1 ಸಮುವೇಲ 14:6

ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.

2 ದಿನವೃತ್ತಾಂತ 14:11

ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.

ಕೀರ್ತನೆಗಳು 18:32

ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.

ಕೀರ್ತನೆಗಳು 27:1

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

ಕೀರ್ತನೆಗಳು 44:3

ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

ಕೀರ್ತನೆಗಳು 60:12

ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.

ಕೀರ್ತನೆಗಳು 118:10

ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.

ರೋಮಾಪುರದವರಿಗೆ 8:31

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಫಿಲಿಪ್ಪಿಯವರಿಗೆ 4:13

ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

ಹೆಬ್ರಿಯರಿಗೆ 11:33

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.

Interlinear

Choose Theme