ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
Cross references
ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.
ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.