ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
Cross references
ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು.
ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್‌ಗೆ ಒಂದು ಭಾಗ.