ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
Cross references
ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,
ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.