ಯೆಹೋಶುವ 19:24 · ಕನ್ನಡ ಬೈಬಲ್
ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
Cross references
ಆದಿಕಾಂಡ 35:26
ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
ನ್ಯಾಯಾಧಿಪತಿಗಳು 1:31
ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
ನ್ಯಾಯಾಧಿಪತಿಗಳು 5:17
ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
1 ಅರಸುಗಳು 4:16
ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
ಯೆಹೆಜ್ಕೇಲ 48:2
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
ಲೂಕ 2:26
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.