ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
Cross references
ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ,