ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
Cross references
ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್, ಬೆತ್ಬಾಳ್ಮೆಯೋನ್,
ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.