Home Bibles ಯೆಹೋಶುವ 22:25 · ಕನ್ನಡ ಬೈಬಲ್
ಯೆಹೋಶುವ 22:25 · ಕನ್ನಡ ಬೈಬಲ್

ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;

Cross references

ಯೆಹೋಶುವ 22:27

ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.

1 ಸಮುವೇಲ 26:19

ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.

2 ಸಮುವೇಲ 20:1

ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

1 ಅರಸುಗಳು 12:16

ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.

1 ಅರಸುಗಳು 12:27

ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.

1 ಅರಸುಗಳು 14:16

ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.

1 ಅರಸುಗಳು 15:30

ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.

ಎಜ್ರಾ 4:2

ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.

ನೆಹೆಮ್ಯ 2:20

ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.

ಕೀರ್ತನೆಗಳು 16:5

ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.

ಅಪೋಸ್ತಲರ ಕೃತ್ಯಗಳು 8:21

ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

Interlinear

Choose Theme