ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Cross references
ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.