Home Bibles ಯೆಹೋಶುವ 24:15 · ಕನ್ನಡ ಬೈಬಲ್
ಯೆಹೋಶುವ 24:15 · ಕನ್ನಡ ಬೈಬಲ್

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

Cross references

ಆದಿಕಾಂಡ 18:19

ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ನಿರ್ಗಮಕಾಂಡ 23:2

ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.

ನಿರ್ಗಮಕಾಂಡ 23:24

ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.

ನಿರ್ಗಮಕಾಂಡ 23:32

ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.

ನಿರ್ಗಮಕಾಂಡ 34:15

ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.

ಲೇವ್ಯಕಾಂಡ 14:42

ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.

ದ್ವಿತೀಯೋಪದೇಶಕಾಂಡ 13:7

ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ

ದ್ವಿತೀಯೋಪದೇಶಕಾಂಡ 29:18

ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.

ನ್ಯಾಯಾಧಿಪತಿಗಳು 6:10

ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.

ರೂತ 1:15

ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.

1 ಅರಸುಗಳು 18:21

ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.

1 ದಿನವೃತ್ತಾಂತ 1:14

ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ

ಕೀರ್ತನೆಗಳು 101:2

ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.

ಕೀರ್ತನೆಗಳು 119:106

ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.

ಕೀರ್ತನೆಗಳು 119:111

ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.

ಯೆಹೆಜ್ಕೇಲ 20:39

ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.

ಯೋಹಾನ 6:67

ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು

ಅಪೋಸ್ತಲರ ಕೃತ್ಯಗಳು 11:23

ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

Interlinear

Choose Theme