Home Bibles ಯೆಹೋಶುವ 24:26 · ಕನ್ನಡ ಬೈಬಲ್
ಯೆಹೋಶುವ 24:26 · ಕನ್ನಡ ಬೈಬಲ್

ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.

Cross references

ಆದಿಕಾಂಡ 28:18

ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಆದಿಕಾಂಡ 35:4

ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.

ಆದಿಕಾಂಡ 35:8

ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.

ನಿರ್ಗಮಕಾಂಡ 24:4

ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ದ್ವಿತೀಯೋಪದೇಶಕಾಂಡ 31:24

ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ

ಯೆಹೋಶುವ 4:3

ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.

ಯೆಹೋಶುವ 4:20

ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.

ನ್ಯಾಯಾಧಿಪತಿಗಳು 9:6

ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.

Interlinear

Choose Theme