ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
Cross references
ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ