ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
Cross references
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?