ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
Cross references
ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.