Home Bibles ಯೆಹೋಶುವ 4:7 · ಕನ್ನಡ ಬೈಬಲ್
ಯೆಹೋಶುವ 4:7 · ಕನ್ನಡ ಬೈಬಲ್

ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್‌ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.

Cross references

ನಿರ್ಗಮಕಾಂಡ 12:14

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

ನಿರ್ಗಮಕಾಂಡ 28:12

ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್‌ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.

ನಿರ್ಗಮಕಾಂಡ 30:16

ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.

ಅಂಕೆಗಳ ಪುಸ್ತಕ 16:40

ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.

ಅಂಕೆಗಳ ಪುಸ್ತಕ 17:5

ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.

ದ್ವಿತೀಯೋಪದೇಶಕಾಂಡ 16:3

ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

ಯೆಹೋಶುವ 3:13

ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.

ಯೆಹೋಶುವ 4:6

ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ

ಕೀರ್ತನೆಗಳು 111:4

ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.

ಯೆಶಾಯ 66:3

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

1 ಕೊರಿಂಥದವರಿಗೆ 11:24

ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

Interlinear

Choose Theme