ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
Cross references
ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.