ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
Cross references
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.
ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.