Home Bibles ಯೆಹೋಶುವ 6:22 · ಕನ್ನಡ ಬೈಬಲ್
ಯೆಹೋಶುವ 6:22 · ಕನ್ನಡ ಬೈಬಲ್

ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

Cross references

ಯೆಹೋಶುವ 2:1

ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.

ಯೆಹೋಶುವ 2:14

ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.

ಯೆಹೋಶುವ 6:17

ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.

ಯೆಹೋಶುವ 9:15

ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.

ಯೆಹೋಶುವ 9:18

ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್‌ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.

ನ್ಯಾಯಾಧಿಪತಿಗಳು 1:25

ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.

2 ಸಮುವೇಲ 21:2

ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)

2 ಸಮುವೇಲ 21:7

ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

ಕೀರ್ತನೆಗಳು 15:4

ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.

ಯೆಹೆಜ್ಕೇಲ 17:13

ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

ಯೆಹೆಜ್ಕೇಲ 17:16

ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 17:18

ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.

ಹೆಬ್ರಿಯರಿಗೆ 11:31

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

Interlinear

Choose Theme