Home Bibles ಯೆಹೋಶುವ 6:25 · ಕನ್ನಡ ಬೈಬಲ್
ಯೆಹೋಶುವ 6:25 · ಕನ್ನಡ ಬೈಬಲ್

ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.

Cross references

ಯೆಹೋಶುವ 2:1

ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.

ಯೆಹೋಶುವ 2:4

ಸ್ತ್ರೀಯು ಆ ಇಬ್ಬರನ್ನು ಅಡಗಿ ಸಿಟ್ಟು--ನನ್ನ ಬಳಿಗೆ ಮನುಷ್ಯರು ಬಂದಿದ್ದರು; ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಯೆಹೋಶುವ 2:6

ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.

ಯೆಹೋಶುವ 2:18

ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.

ಯೆಹೋಶುವ 4:9

ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.

ಯೆಹೋಶುವ 11:19

ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್‌ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.

ನ್ಯಾಯಾಧಿಪತಿಗಳು 1:24

ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.

ನ್ಯಾಯಾಧಿಪತಿಗಳು 1:25

ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.

ಮತ್ತಾಯ 1:5

ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;

ಅಪೋಸ್ತಲರ ಕೃತ್ಯಗಳು 2:21

ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.

ಹೆಬ್ರಿಯರಿಗೆ 11:31

ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ಯಾಕೋಬ 2:25

ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.

Interlinear

Choose Theme