Home Bibles ☰ Books ಯೆಹೋಶುವ 6:9 · ಕನ್ನಡ ಬೈಬಲ್
ಯೆಹೋಶುವ 6:9 · ಕನ್ನಡ ಬೈಬಲ್

ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.

Cross references

ಅಂಕೆಗಳ ಪುಸ್ತಕ 10:25

ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.

ಯೆಹೋಶುವ 6:13

ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.

ಯೆಶಾಯ 52:11

ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.

ಯೆಶಾಯ 58:8

ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.

Interlinear

Choose Theme