ಯೆಹೋಶುವ 7:17 · ಕನ್ನಡ ಬೈಬಲ್
ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
Cross references
ಆದಿಕಾಂಡ 38:30
ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
ಅಂಕೆಗಳ ಪುಸ್ತಕ 26:20
ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
1 ದಿನವೃತ್ತಾಂತ 2:4
ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.