ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂ
ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.