ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
Cross references
ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ
ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.