ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
Cross references
ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.