ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
Cross references
ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.