ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.
Cross references
ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.