Home Bibles ನ್ಯಾಯಾಧಿಪತಿಗಳು 11:8 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 11:8 · ಕನ್ನಡ ಬೈಬಲ್

ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.

Cross references

ನಿರ್ಗಮಕಾಂಡ 8:8

ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.

ನಿರ್ಗಮಕಾಂಡ 8:28

ಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.

ನಿರ್ಗಮಕಾಂಡ 9:28

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

ನಿರ್ಗಮಕಾಂಡ 10:17

ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.

ನ್ಯಾಯಾಧಿಪತಿಗಳು 10:18

ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.

1 ಅರಸುಗಳು 13:6

ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.

ಲೂಕ 17:3

ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.

Interlinear

Choose Theme