ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
Cross references
ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.