Home Bibles ನ್ಯಾಯಾಧಿಪತಿಗಳು 13:20 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 13:20 · ಕನ್ನಡ ಬೈಬಲ್

ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.

Cross references

ಆದಿಕಾಂಡ 17:3

ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--

ಲೇವ್ಯಕಾಂಡ 9:24

ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.

ನ್ಯಾಯಾಧಿಪತಿಗಳು 6:19

ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.

ನ್ಯಾಯಾಧಿಪತಿಗಳು 6:21

ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.

2 ಅರಸುಗಳು 2:11

ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.

1 ದಿನವೃತ್ತಾಂತ 21:16

ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

1 ದಿನವೃತ್ತಾಂತ 21:21

ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.

1 ದಿನವೃತ್ತಾಂತ 21:26

ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

ಕೀರ್ತನೆಗಳು 47:5

ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.

ಯೆಹೆಜ್ಕೇಲ 1:26

ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಯೆಹೆಜ್ಕೇಲ 1:28

ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.

ದಾನಿಯೇಲ 10:9

ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.

ಮತ್ತಾಯ 17:6

ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಹೆಬ್ರಿಯರಿಗೆ 1:3

ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.

Interlinear

Choose Theme