ನ್ಯಾಯಾಧಿಪತಿಗಳು 14:16 · ಕನ್ನಡ ಬೈಬಲ್
ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
Cross references
ಆದಿಕಾಂಡ 2:24
ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ನ್ಯಾಯಾಧಿಪತಿಗಳು 16:15
ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
ನ್ಯಾಯಾಧಿಪತಿಗಳು 16:16
ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.