ನ್ಯಾಯಾಧಿಪತಿಗಳು 15:13 · ಕನ್ನಡ ಬೈಬಲ್
ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
Cross references
ನ್ಯಾಯಾಧಿಪತಿಗಳು 16:11
ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
ಅಪೋಸ್ತಲರ ಕೃತ್ಯಗಳು 21:33
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.