Home Bibles ☰ Books ನ್ಯಾಯಾಧಿಪತಿಗಳು 16:10 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:10 · ಕನ್ನಡ ಬೈಬಲ್

ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.

Cross references

ನ್ಯಾಯಾಧಿಪತಿಗಳು 16:7

ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.

ನ್ಯಾಯಾಧಿಪತಿಗಳು 16:13

ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.

ನ್ಯಾಯಾಧಿಪತಿಗಳು 16:15

ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.

ನೆಹೆಮ್ಯ 6:4

ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.

ಸಾಮೇತಿಗಳು 23:7

ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.

ಸಾಮೇತಿಗಳು 24:28

ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.

ಯೆಹೆಜ್ಕೇಲ 33:31

ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.

ಲೂಕ 22:48

ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.

Interlinear

Choose Theme