Home Bibles ☰ Books ನ್ಯಾಯಾಧಿಪತಿಗಳು 16:18 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 16:18 · ಕನ್ನಡ ಬೈಬಲ್

ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.

Cross references

ಅಂಕೆಗಳ ಪುಸ್ತಕ 22:7

ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

ನ್ಯಾಯಾಧಿಪತಿಗಳು 16:5

ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.

1 ಅರಸುಗಳು 21:20

ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;

ಕೀರ್ತನೆಗಳು 62:9

ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.

ಸಾಮೇತಿಗಳು 18:8

ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.

ಯೆರೆಮಿಯ 9:4

ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.

ಮತ್ತಾಯ 26:15

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಎಫೆಸದವರಿಗೆ 5:5

ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

Interlinear

Choose Theme