ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
Cross references
ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.