Home Bibles ☰ Books ನ್ಯಾಯಾಧಿಪತಿಗಳು 19:2 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 19:2 · ಕನ್ನಡ ಬೈಬಲ್

ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.

Cross references

ಲೇವ್ಯಕಾಂಡ 21:9

ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.

ದ್ವಿತೀಯೋಪದೇಶಕಾಂಡ 22:21

ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;

ಯೆಹೆಜ್ಕೇಲ 16:28

ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.

Interlinear

Choose Theme