Home Bibles ನ್ಯಾಯಾಧಿಪತಿಗಳು 2:16 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 2:16 · ಕನ್ನಡ ಬೈಬಲ್

ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

Cross references

ನ್ಯಾಯಾಧಿಪತಿಗಳು 3:9

ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.

ನ್ಯಾಯಾಧಿಪತಿಗಳು 3:15

ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.

ನ್ಯಾಯಾಧಿಪತಿಗಳು 3:31

ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.

ನ್ಯಾಯಾಧಿಪತಿಗಳು 4:5

ಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.

ನ್ಯಾಯಾಧಿಪತಿಗಳು 6:14

ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.

ನ್ಯಾಯಾಧಿಪತಿಗಳು 10:1

ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.

ನ್ಯಾಯಾಧಿಪತಿಗಳು 11:32

ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.

ರೂತ 1:1

ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.

1 ಸಮುವೇಲ 12:11

ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.

1 ಸಮುವೇಲ 14:48

ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.

2 ಸಮುವೇಲ 7:11

ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.

ನೆಹೆಮ್ಯ 9:27

ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.

ಕೀರ್ತನೆಗಳು 106:43

ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.

ಅಪೋಸ್ತಲರ ಕೃತ್ಯಗಳು 13:20

ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.

Interlinear

Choose Theme