ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
Cross references
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
ಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.
ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.