Home Bibles ☰ Books ನ್ಯಾಯಾಧಿಪತಿಗಳು 20:41 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 20:41 · ಕನ್ನಡ ಬೈಬಲ್

ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.

Cross references

ನಿರ್ಗಮಕಾಂಡ 15:9

ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.

ಯೆಹೋಶುವ 8:20

ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.

ಯೆಶಾಯ 13:8

ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.

ಯೆಶಾಯ 33:14

ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.

ಲೂಕ 17:27

ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.

ಲೂಕ 21:26

ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

1 ತೆಸಲೋನಿಕದವರಿಗೆ 5:3

ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

2 ಪೇತ್ರ 2:12

ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ

ಪ್ರಕಟನೆ 6:15

ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

ಪ್ರಕಟನೆ 18:8

ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.

Interlinear

Choose Theme