ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
Cross references
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.