ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
Cross references
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು
ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.
ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.
ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.